ತಬ್ಬಲಿಯು ನೀನಾದೆ ಮಗನೆ

ತಬ್ಬಲಿಯು ನೀನಾದೆ ಮಗನೆ

Vendor
ಎಸ್. ಎಲ್. ಭೈರಪ್ಪ
Regular price
Rs. 375
Sale price
Rs. 375
Regular price
Sold out
Unit price
per 

ಗೋವನ್ನು ಸರ್ವದೇವತೆಗಳ ಸ್ವರೂಪವೆಂದು ಪೂಜಿಸುವ ಕಾಳಿಂಗಜ್ಜ ಮತ್ತು ಅದು ಹಾಲು ಮಾಂಸಗಳನ್ನು ಕೊಡುವ ಪ್ರಾಣಿ ಮಾತ್ರ ಎಂದು ಭಾವಿಸುವ ಆಮೆರಿಕೆಯಿಂದ ಹಿಂತಿರುಗಿದ ಮೊಮ್ಮಗ, ಇವರ ಮೌಲ್ಯಸಂವೇದನೆಗಳ ನಡುವೆ ನಡೆಯುವ ತಿಕ್ಕಾಟವೇ ಈ ಕಾದಂಬರಿಯ ವಸ್ತು.

ಪ್ರಾಯಶಃ ಭಾರತದ ಎಲ್ಲ ಭಾಷೆಗಳಲ್ಲೂ ಪ್ರಚಲಿತವಿರುವ ಗೋವಿನ ಹಾಡಿನ ಹಿನ್ನಲೆಯಲ್ಲಿ ಆರಂಭವಾಗುವ ಕಾದಂಬರಿಯು, ಭಾರತೀಯ ಸಂಸ್ಕೃತಿಯ ಮೂಲ ಬೇರುಗಳನ್ನು ಹಿನ್ನಲೆಯಲ್ಲಿ ಕಾಣಿಸುತ್ತದೆ. ಈ ಕೃತಿಯನ್ನಾಧರಿಸಿ ಕನ್ನಡ   ಮತ್ತು ಹಿಂದಿಯಲ್ಲಿ ನಿರ್ಮಿಸಿರುವ ಚಲನ ಚಿತ್ರಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮನ್ನಣೆ ಪಡೆದಿವೆ. ಈ ಕಾದಂಬರಿಯ ಹಿಂದೀ ಅನುವಾದವೂ ಅಪಾರವಾದ ಮೆಚ್ಚುಗೆ ಪಡೆದಿದೆ.

ಇದೊಂದು ಉತ್ಕೃಷ್ಟ ಸಾಹಿತ್ಯಕೃತಿ ಎಂದು ಭಾವಿಸುವವರಿರುವಂತೆಯೇ, ಪ್ರಗತಿವಿರೋಧಿ,ಪ್ರತಿಗಾಮಿ ಮೌಲ್ಯಗಳನ್ನು ಪ್ರತಿಪಾದಿಸುವ ತೀರ ಕಳಪೆ ಕಾದಂಬರಿ ಎಂದು ಇದನ್ನು ದೇಷಿಸುವವರೂ ಇದ್ದಾರೆ. ಪ್ರೀತಿ ದ್ವೇಷಗಳೆರಡನ್ನೂ ಪ್ರಚೋದಿಸುವ ಈ ಗುಣವು ಕಾದಂಬರಿಯ ಶಕ್ತಿಯ ಗುರುತಾಗಿದೆ.

Customer Reviews

No reviews yet
0%
(0)
0%
(0)
0%
(0)
0%
(0)
0%
(0)